ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಗತ್ಯ ವಿವಾದಗಳಿಂದ ಶಕ್ತಿ ಕುಂದಿಲ್ಲ. ಅವರನ್ನು ರಾಜ್ಯದ ಜನತೆ ಟಗರೆಂದು ಕರೆಯುತ್ತಾರೆ ಎಂದು ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ನಗರದಲ್ಲಿ ಇಂದು(ನ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ ಅವರನ್ನು ಟಗರೆಂದು ಕರೆಯುತ್ತಾರೆ. ಅವರಿಗೆ ಯಾವುದೇ ಶಕ್ತಿ ಕುಂದಿಲ್ಲ, ಅವರಲ್ಲಿ ಇಂದಿಗೂ ಪೂರ್ಣ ಪ್ರಮಾಣದ ಶಕ್ತಿಯಿದೆ. ಒಂದು ವೇಳೆ ಸಿದ್ದರಾಮಯ್ಯ ಅವರ ಶಕ್ತಿ ಕುಂದಿದಾಗ ತುಂಬೋಣ ಎಂದರೆ ಅವರಿಗೆ ಶಕ್ತಿಯೇ ಖಾಲಿ ಆಗಿಲ್ಲವಲ್ಲ ಎಂದು ಹೇಳಿದ್ದಾರೆ.
ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರೇ ಇಲ್ಲ ಸಲ್ಲದ ಸುಳ್ಳುಗಳನ್ನು ಹೇಳಿದ್ದು, ಸರ್ಕಾರಕ್ಕೆ 316 ಸಂಖ್ಯೆಯಷ್ಟು ನೋಟಿಸ್‌ಗಳನ್ನು ನೀಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಜಿಲ್ಲಾ ಮಟ್ಟದಲ್ಲಿ ಸರಿಪಡಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನು ಸಿಎಂ ಹಾಗೂ ಸಚಿವರ ಸಭೆಗಳ ಎಲ್ಲ ಸಭೆಗಳ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಹೀಗಾಗಿ ಡಿಸೆಂಬರ್ 9 ರಿಂದ ಅಧಿವೇಶನಗಳನ್ನು ನಡೆಸಲಾಗುತ್ತದೆ. ಈ ಅಧಿವೇಶನದಲ್ಲಿ ಪ್ರತಿಯೊಬ್ಬ ಶಾಸಕರು ಭಾಗಿಯಾಗಬೇಕು. ಅಲ್ಲಿ ನಡೆಯುವ ಯಾವುದೇ ಚರ್ಚೆಗಳಿಗೂ ಸಮರ್ಪಕವಾಗಿ ಮಂತ್ರಿಗಳು ಉತ್ತರ ನೀಡಬೇಕೆಂದು ಸೂಚಿಸಲಾಗಿದೆ ತಿಳಿಸಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…