DCM DK Shivakumar
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
“ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ” ಎಂದರು.
“ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ” ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…