ರಾಜ್ಯ

ಕೃಷಿ ವಿಶ್ವವಿದ್ಯಾಲಯಗಳ ನಡುವೆ ಸಮನ್ವಯತೆ ಅಗತ್ಯ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಎಲ್ಲರೂ ಸ್ವಹಿತಾಸಕ್ತಿ ಬದಿಗೊತ್ತಿ ಸಾರ್ವಜನಿಕ ಪ್ರಾಮುಖ್ಯತೆಗೆ ಆದ್ಯತೆ ನೀಡಬೇಕೆಂದರು.

ರಾಜ್ಯದಲ್ಲಿ ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ವಿಶ್ವವಿದ್ಯಾನಿಲಯಗಳ ಹಿತದೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಪುನರ್ ವಿಂಗಣೆ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಸರ್ಕಾರಕ್ಕೆ ಎಲ್ಲಾ ಜಿಲ್ಲೆಗಳು ಹಾಗೂ ಎಲ್ಲಾ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಒಂದೇ ಮಹತ್ವ ಹೊಂದಿವೆ. ಹಾಗಾಗಿ ಎಲ್ಲಾ ಜಿಲ್ಲೆಗಳು ಮತ್ತು ವಿಶ್ವವಿದ್ಯಾಲಯಗಳ ಹಿತಾಸಕ್ತಿಯನ್ನು ಗಮನಹರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳಿಗೆ ಇನ್ನಷ್ಟು ಹೆಚ್ಚು ಆದ್ಯತೆ ನೀಡಬೇಕು. ರೈತರನ್ನು ತಾಂತ್ರಿಕವಾಗಿ ಸಶಕ್ತರನ್ನಾಗಿ ಮಾಡಿ ಕೃಷಿ ಕ್ಷೇತ್ರವನ್ನು ಸದೃಡಗೊಳಿಸಬೇಕು. ನಿಶ್ಚಿತ, ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಬೇಕೆಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ತಾಂತ್ರಿಕ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆ ಹಾಗೂ ಸವಾಲುಗಳನ್ನು ಕುರಿತು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ದಪಡಿಸುವಂತೆ ಸೂಚಿಸಿದ ಸಚಿವರು ಈ ಬಗ್ಗೆ ಮಾರ್ಚ್ ನಂತರ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಮಂಡ್ಯ ವಿ.ಸಿ ಫಾರಂನಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಸಮಗ್ರ ವಿಶ್ವವಿದ್ಯಾಲಯಗಳ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ ಅದಕ್ಕಾಗಿಯೇ ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ. ಇದೇ ರೀತಿ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳನ್ನು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದ್ದು, ಅದಕ್ಕಾಗಿಯೇ ತಜ್ಞರ ಸಮಿತಿ ರಚಿಸಲಾಗುತ್ತಿದೆ ಎಂದರು.

ಕೃಷಿ ಇಲಾಖೆ ಕಾರ್ಯದರ್ಶಿ ಡಾ. ರವಿಶಂಕರ್ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾದ ಡಾ.ಸುರೇಶ್, ಡಾ ಹನುಮಂತಪ್ಪ, ಡಾ ವಿಷ್ಣುವರ್ಧನ್, ಡಾ ಪಿ.ಎಲ್.ಪಾಟೀಲ್, ಡಾ.ಆರ್.ಸಿ.ಜಗದೀಶ, ಮಂಡ್ಯ ಕೃಷಿ ವಿವಿ ವಿಶೇಷಾಧಿಕಾರಿ ಡಾ. ಹರಿಣಿ ಕುಮಾರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago