ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕು ಎಂದು ಹಲವೆಡೆ ಆಗ್ರಹ ಕೇಳಿಬರುತ್ತಿದೆ. ಸದ್ಯಕ್ಕೆ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.
ಇದನ್ನು ಓದಿ: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್ ಗುಂಡೂರಾವ್ ರಿಯಾಕ್ಷನ್
ಇದೇ ವೇಳೆ ಸಮನ್ವಯ ಸಮಿತಿ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.





