ರಾಜ್ಯ

ವಿಪಕ್ಷಗಳಿಗೆ ಸಿಕ್ಕ ಮತ್ತೊಂದು ಅಸ್ತ್ರ: ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕನಿಂದಲೇ ಭ್ರಷ್ಟಾಚಾರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.‌ಪಾಟೀಲ್‌ ಭ್ರಷ್ಟಾಚಾರದ ಆರೋಪ ಮಾಡಿದ್ದು, ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.‌ಪಾಟೀಲ್‌ ಅವರು ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಆಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಹಣ ನೀಡಿದವರಿಗಷ್ಟೇ ವಸತಿ ಮನೆಗಳನ್ನು ಮಾಡುತ್ತಿದ್ದೀರಿ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನನ್ನ ಕ್ಷೇತ್ರದಲ್ಲಿ ಹಣ ಪಡೆದು ವಸತಿ ಹಂಚಲಾಗಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಬಿ.ಆರ್.‌ಪಾಟೀಲ್‌ (B R Patil) ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಸ್ವಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ಈಗ ಮತ್ತೊಂದಯ ದೊಡ್ಡ ಅಸ್ತ್ರ ಸಿಕ್ಕಿದಂತಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಮಾತನಾಡಿದ್ದು, ಕಾಂಗ್ರೆಸ್‌ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರಗಳಲ್ಲಿ ಒಂದು. ಕಾಂಗ್ರೆಸ್‌ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್.‌1 ಆಗಿದೆ. ಸ್ವಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆ ಉಳಿದಿದೆ? ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

8 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

8 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

8 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

8 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

9 hours ago