ರಾಜ್ಯ

ಭ್ರಷ್ಟತೆ-ಲೂಟಿಕೋರತನ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಸರ್ಕಾರದ ವಿರುದ್ದ ಸುದೀರ್ಘ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿರುವ ಅವರು, ಕಾಂಗ್ರೆಸ್ ಶಾಸಕರು ಹತಾಶೆಯ ಹಂತ ತಲುಪಿದ್ದಾರೆ. ಶಾಸಕರ ಸಂಯಮದ ಕಟ್ಟೆಯೊಡೆಯಲು ಆರಂಭವಾಗಿದೆ. ಬಿ.ಆರ್.ಪಾಟೀಲ್, ರಾಜು ಕಾಗೆ ಅವರ ಸಾಲಿನಲ್ಲಿ ಬಹುತೇಕ ಕಾಂಗ್ರೆಸ್ ಶಾಸಕರು ನಿಂತಿದ್ದಾರೆ. ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವ್ಯವಸ್ಥೆಯ ಭ್ರಷ್ಟತೆ ಹಾಗೂ ಲೂಟಿಕೋರತನದಿಂದ ಬೇಸತ್ತು ಅಸಹಾಯಕ ಪರಿಸ್ಥಿತಿ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡುವಂತೆ ಆಗ್ರಹಿಸಿದ್ದಾರೆ.

ವಿಧಾನಸಭಾ ಕ್ಷೇತ್ರವಾರು ಪ್ರತಿಯೊಂದು ಸರ್ಕಾರಿ ಕೆಲಸಕ್ಕೂ ಜನರು ಲಂಚ ನೀಡಬೇಕಾದ ಪರಿಸ್ಥಿತಿಯಿತ್ತು, ಈಗ ಶಾಸಕರನ್ನೂ ಲಂಚದ ಭೂತ ಆವರಿಸಿ ಬಿಟ್ಟಿದೆ ಎಂಬುದನ್ನು ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ರಾಜು ಕಾಗೆ ಸಾಕ್ಷೀಕರಿಸಿದ್ದಾರೆ. ಅನುದಾನವಿಲ್ಲದೆ, ಜನರ ಸಮಸ್ಯೆಗಳನ್ನು ನೀಗಿಸಲಾಗದೆ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ದ ಭ್ರಷ್ಟಚಾರದ ಆರೋಪಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಗಮನ ಸೆಳೆದಿದ್ದಾರೆ.

ಭ್ರಷ್ಟತೆ-ಲೂಟಿಕೋರತನ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ ವಾಸ್ತವ ಸ್ಥಿತಿಯನ್ನು ವಿವರಿಸಿ ಆಕ್ರೋಶ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿರುವ ದುಸ್ಥಿತಿಯನ್ನು ವಿವರಿಸಿದ್ದಾರೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಾದ ಪರಿಸ್ಥಿತಿಯನ್ನು ವಿವರಿಸಿ ಸರ್ಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ಕಚೇರಿಗಳಲ್ಲಿ ದರ ಹಾಗೂ ಪರ್ಸೆಂಟೇಜ್ ನಿಗದಿಪಡಿಸಿ ವಸೂಲಿ ಮಾಡಲಾಗುತ್ತಿರುವ ಪರಿಸ್ಥಿತಿಯನ್ನು ಸ್ವತಃ ಕಂದಾಯ ಸಚಿವರೇ ಅನಾವರಣಗೊಳಿಸಿದ್ದಾರೆ.
ಕಾಂಗ್ರೆಸ್ ಆಡಳಿತ ರಾಜ್ಯಕ್ಕೆ ಶಾಪಗ್ರಸ್ತವಾಗಿ ಕಾಡುತ್ತಿದೆ. ಭಾರತೀಯ ಜನತಾ ಪಾರ್ಟಿಯ ಹೋರಾಟ, ಜನಾಕ್ರೋಶ ಯಾತ್ರೆಯ ಕುರಿತು ಹಗುರವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕರೇ ಇದೀಗ ಉತ್ತರ ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಂದು ಕಡೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶೀತಲ ಸಮರ ನಡೆಯುತ್ತಿದ್ದರೆ, ಮತ್ತೊಂದು ಕಡೆ ಅಭಿವೃದ್ಧಿ ಶೂನ್ಯತೆಯಿಂದ ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಸಿಡಿದೆದ್ದು ನಿಂತಿದ್ದಾರೆ. ಇದರ ನಡುವೆ ಜನಸಾಮಾನ್ಯರ ಸ್ಥಿತಿ ಅಸಹನೀಯವಾಗಿದೆ. ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎನ್ನುವ ಚಿತ್ರಣ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago