ಬೆಂಗಳೂರು: ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೆಲೆ ಏರಿಕೆ ನೀತಿಯಿಂದ ರಾಜ್ಯದ ಜನತೆ ಹೈರಣಾಗಿದ್ದಾರೆ. ಹಾಗಾಗಿಯೇ ರಾಜ್ಯಾದ್ಯಂತ ಜನಕ್ರೋಶ ವ್ಯಕ್ತವಾಗುತ್ತಿದೆ. ಇನ್ನು 20 ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಲಿದೆ ಎಂದು ವಾಗ್ದಾಳಿ ನಡೆಸಿದರು.
ಒಂದು ಕಡೆ ಗ್ಯಾರಂಟಿ ಯೋಜನೆಗಳನ್ನು ನೀಡಿ ಮತ್ತೊಂದು ಕಡೆ ಬೆಲೆ ಏರಿಕೆ ಮೂಲಕ ಸುಲಿಗೆ ಮಾಡುವ ಸರ್ಕಾರದ ನಿಜ ಬಣ್ಣ ಜನತೆಗೆ ಗೊತ್ತಾಗಿದೆ. ಆದ ಕಾರಣ ಸಿಎಂ ಹಾಗೂ ಸಚಿವರು ಎಲ್ಲಿಯೂ ಪ್ರವಾಸ ಮಾಡುತ್ತಿಲ್ಲ. ಭೇಟಿ ನೀಡಿದರೆ ಜನಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಕಾಲಹರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.





