ರಾಜ್ಯ

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿ : ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ !

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಅಲ್ಲದೆ, ಸರಕಾರದ ಆದೇಶದ ಪ್ರತಿಯನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಅವರು ಕಿಡಿಕಾರಿದ್ದಾರೆ.

ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ.

ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಅವರು ಕಿಡಿಕಾರಿದ್ದಾರೆ.

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅವರು, ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago