ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ತೆರಳದಂತೆ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸಡಲಿಕೆ ಮಾಡಿ ಆದೇಶ ನೀಡಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಬೆಂಗಳೂರು ಬಿಟ್ಟು ತೆರಳಬಾರದು ಎಂಬುದು ಪ್ರಮುಖ ಷರತ್ತುಗಳಲ್ಲಿ ಒಂದಾಗಿತ್ತು.
ಷರತ್ತು ಸಡಿಲಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿ ಸಡಿಲಿಕೆ ನೀಡಿದೆ. ಇದು ದರ್ಶನ್‌ಗೆ ಮಾತ್ರ ಅನ್ವಯವಾಗುತ್ತದೆ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಚಿತ್ರೀಕರಣಕ್ಕಾಗಿ ಬೆಂಗಳೂರು ಬಿಟ್ಟು ಬೇರೆಡೆ ಹೋಗಲು ಅವಕಾಶಕ್ಕೆ ಮನವಿ ಮಾಡಿದ್ದ ದರ್ಶನ್‌ಗೆ ಸದ್ಯ ಬೆಂಗಳೂರು ಬಿಟ್ಟು ಹೋಗಲು ಹೈಕೋರ್ಟ್ ಅವಕಾಶ ನೀಡಿದೆ. ಕೋರ್ಟ್ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.





