ಕಲಬುರಗಿ: ಇಲ್ಲಿನ ಕೋರ್ಟ್ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಅನುಮತಿ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರು, ದರ್ಗಾದಲ್ಲಿರುವ ಶಿವಲಿಂಗಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಇಂದು(ಫೆಬ್ರವರಿ.25) ಪರಿಗಣಿಸಿದ ಹೈಕೋರ್ಟ್‌ನ ವಿಭಾಗೀಯ ಪೀಠವೂ ನಾಳೆ (ಫೆಬ್ರವರಿ. 26) ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ ಈ ಪೂಜೆಯನ್ನು ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ 15 ಹಿಂದೂ ಮುಖಂಡರು ಮಾತ್ರ ಶಿವಲಿಂಗ ಪೂಜೆ ನೆರವೇರಿಸಬೇಕು ಎಂದು ಹೇಳಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅರ್ಜಿದಾರ ಸಿದ್ದರಾಮಯ್ಯ ಹಿರೇಮಠ ಸೇರಿದಂತೆ ಇನ್ನಿತರ 15 ಜನರು ಆಧಾರಕಾರ್ಡ್‌ನೊಂದಿಗೆ ಜಿಲ್ಲಾಡಳಿತಕ್ಕೆ ಲಿಸ್ಟ್ ನೀಡಬೇಕು ಎಂದು ಸೂಚಿಸಿದೆ.
ಏನಿದು ಪ್ರಕರಣ?
ದರ್ಗಾದ ಆವರಣದಲ್ಲಿ 15ನೇ ಶತಮಾನದಲ್ಲಿ ಆಗಿದ್ದ ಸಂತ ಶಿವಾಜಿ ಮಹಾರಾಜರ ಗುರು, ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿ ಇದೆ. ಈ ಸಮಾಧಿಯ ಮೇಲೆ ಶಿವಲಿಂಗವಿದ್ದು, ಇಲ್ಲಿಗೆ ಹೋಗುತ್ತಿದ್ದ ಹಲವು ಹಿಂದೂ ಭಕ್ತರು, ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ನಮಸ್ಕರಿಸಿ, ಪೂಜೆ ಸಲ್ಲಿಸಿ ಬರುತ್ತಿದ್ದರು. ಅಲ್ಲದೇ ಜೋಶಿ ಎಂಬ ಮನೆತನದವರು ಈ ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸುತ್ತಿದ್ದರು. ಆ ಸ್ಥಳದಲ್ಲಿ ಇತ್ತೀಚಿನವರೆಗೆ ಅಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಇತ್ತು. ಆದರೆ ಕಳೆದ ವರ್ಷ ಶಿವಲಿಂಗದ ಮೇಲೆ ಯಾರೋ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲ-ಮೂತ್ರ ವಿಸರ್ಜನೆ ಮಾಡಿದ್ದನ್ನು ಆಳಂದ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರು 2021ರ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಇತಿಹಾಸ ಹಿನ್ನೆಲೆ ಹೊಂದಿರುವ ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಒತ್ತಾಯವೇ ಮತ್ತೊಂದು ಕೋಮಿನ ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…