Mysore
24
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಕೊರೊನಾ ಆರ್ಭಟ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

corona

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ತನ್ನ ಆರ್ಭಟ ಶುರುಮಾಡಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

* ಜ್ವರ, ಕೆಮ್ಮು ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು, ಸಂಪೂರ್ಣವಾಗಿ ಕಡಿಮೆಯಾದ ಮೇಲೆ ಕಳುಹಿಸಬೇಕು.
* ಕೋವಿಡ್‌ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಕೂಡಲೇ ಮನೆಗೆ ಕಳುಹಿಸಬೇಕು.
* ಶಾಲಾ ಸಿಬ್ಬಂದಿ, ಶಿಕ್ಷಕರಲ್ಲಿ ಕೋವಿಡ್‌ ಲಕ್ಷಣ ಕಂದು ಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು.
* ಶಾಲೆಗಳಲ್ಲಿ ಸ್ವಚ್ಚತೆ ಹಾಗೂ ಕೋವಿಡ್‌ ನಿಯಮ ಪಾಲನೆ ಕಡ್ಡಾಯ

ಇನ್ನು ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸಿಲಿಂಡರ್‌, ತುರ್ತು ಐಸಿಯು ಬೆಡ್‌ ವ್ಯವಸ್ಥೆ, ತುರ್ತು ಚಿಕಿತ್ಸಾ ಘಟಕ, ವೆಂಟಿಲೇಟರ್‌, ಸ್ಯಾನಿಟೈಸರ್‌, ಮಾಸ್ಕ್‌ ಸೇರಿದಂತೆ ಕೋವಿಡ್‌ ಸಂಬಂಧಿಸಿದ ಉಪಕರಣಗಳನ್ನು ಸಿದ್ಧಪಡಿಸಿ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

Tags:
error: Content is protected !!