ರಾಜ್ಯ

ಕೋವಿಡ್‌ ಹಗರಣ: ತಪ್ಪಿತಸ್ಥರೂ ಎಷ್ಟೇ ಪ್ರಭಾವಿಗಳಾದರೂ ಶಿಕ್ಷೆಯಾಗುತ್ತದೆ-ಸಚಿವ ಶರಣಪ್ರಕಾಶ್‌ ಪಾಟೀಲ್‌

ಕಲಬುರ್ಗಿ: ಕೋವಿಡ್‌ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಹಗರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ. ಅದನ್ನು ನಮ್ಮ ಸರ್ಕಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಕೋವಿಡ್‌ ಸಂದರ್ಭದಲ್ಲಿ ಹಗರಣ ನಡೆದಿತ್ತು ಎಂಬುದಕ್ಕೆ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ ಎಂದು ಹೇಳಿದ್ದಾರೆ.

ಕೋವಿಡ್‌ ವೇಳೆ ಅವ್ಯವಹಾರ ನಡೆದಿದೆ ಎಂಬುದು ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿ ಉಲ್ಲೇಖವಾಗಿದೆ. ಈ ವರದಿಯ ಆಧಾರದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಹಾಗಾಗಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ, ಇದಕ್ಕೆ ಬಿಜೆಪಿಯವರು ಯಾಕೆ ಭಯ ಪಡಬೇಕು ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಯಾರನ್ನೋ ಭಯ ಬೀಳಿಸುವುದಕ್ಕೆ ಅಥವಾ ಸೇಡಿನ ರಾಜಕಾರಣಕ್ಕಾಗಲಿ ಈ ತನಿಖೆಯನ್ನು ಮಾಡುತ್ತಿಲ್ಲ. ಬದಲಾಗಿ ಕೋವಿಡ್‌ ಸಂದರ್ಭದಲ್ಲಿ ಸಾರ್ವಜನಿಕರು ಆಕ್ಸಿಜನ್‌ ಇಲ್ಲದೆ ಬೀದಿಯಲ್ಲಿ ಹೆಣವಾಗಿದ್ದಾರೆ. ಹೀಗಾಗಿ ಜನರಿಗೆ ಮಾತು ಕೊಟ್ಟಂತೆ ನಮ್ಮ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

18 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

30 mins ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

45 mins ago

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

54 mins ago

ತಮಿಳುನಾಡು ವಿಧಾನಸಭಾ ಚುನಾವಣೆ: ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿವೈಎಸ್ಪಿ ಭೇಟಿ, ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,…

1 hour ago

ಗಲ್ಲಾಪೆಟ್ಟಿಗೆಯಲ್ಲಿ ಧುರಂಧರ್-‌2 ಅಬ್ಬರ: 800 ಕೋಟಿ ಕ್ಲಬ್‌ ಸೇರುವತ್ತ ಓಟ

ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್-‌2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ…

1 hour ago