Mysore
34
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ಕೋವಿಡ್‌ ಹೆಚ್ಚಳ : ನಾಳೆ ತಜ್ಞರೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್1 ಭೀತಿ ಹಿನ್ನಲೆಯಲ್ಲಿ, ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ರೂಪಾಂತರಿ ಜೆಎನ್1 ಆರ್ಭಟಿಸುತ್ತಿದೆ. ಅದರಲ್ಲೂ ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಜೆಎನ್1 ರೂಪಾಂತರಿ ಹೆಚ್ಚೇ ಇದೆ. ಈ ಹಿನ್ನಲೆಯಲ್ಲಿ ಈಗಾಗಲೇ ದೇಶಾದ್ಯಂತ ಕೇಂದ್ರ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ.

ಇತ್ತ ಕರ್ನಾಟಕದಲ್ಲೂ ಕೊರೋನಾ ತಡೆಯ ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಧರಿಸೋದು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ವೃದ್ಧರೊಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ.

ಈ ಎಲ್ಲಾ ಕಾರಣದಿಂದ ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ನಾಳೆ ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಯನ್ನು ನಡೆಸಲಿದ್ದು, ತಜ್ಞರೊಂದಿಗೆ ಚರ್ಚಿಸಿ ಕೋವಿಡ್ ತಡೆಗೆ ಮಹತ್ವದ ನಿರ್ಧಾರಗಳನ್ನು ಪ್ರಕಟಿಸೋ ಸಾಧ್ಯತೆ ಇದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!