ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ ಮೂಲಕ ದೊಡ್ಡ ಹಗರಣವನ್ನು ಸೃಷ್ಟಿ ಮಾಡಿದ್ದಾರೆ. ನಮ್ಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಾವು ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಟ್ಟಿದ್ದೇವೆ. ಅದು ನಮ್ಮ ಜವಾಬ್ದಾರಿ. ಕೋವಿಡ್ ಸಮಯದಲ್ಲಿ ಕಳಪೆ ಗುಣಮಟ್ಟದ ಉಪಕರಣಗಳನ್ನು ಬಳಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕೆಲಸ ಮಾಡಬೇಕು ನಿಜ, ಆದರೆ ಲೂಟಿ ಹೊಡೆಯಬೇಕು ಎಂದೆನಿಲ್ಲಾ. ಆದರೆ ಕೋವಿಡ್ ಸಮಯದಲ್ಲಿ ಸಾವು-ಬದುಕಿನ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ ಎಂದು ಕಿಡಿಕಾರಿದರು.
ಕೊರೊನಾ ಕಾಲದಲ್ಲಿ ಮಾನವೀಯತೆ ಮೆರೆಯಬೇಕಿತ್ತು. ಆದರೆ ಸಾವಿರಾರು ಕೋಟಿ ಲೂಟಿ ಹೊಡೆದು ದೊಡ್ಡ ಹಗರಣವನ್ನೇ ಸೃಷ್ಟಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಗರಣದಲ್ಲಿ ಡಾ.ಕೆ.ಸುಧಾಕರ್ ಭಾಗಿಯಾಗಿರುವುದು ನಿಶ್ಚಿತವಾಗಿದೆ. ನಾನು ರಿಪೋರ್ಟ್ ನೋಡಿಲ್ಲ. ಆದ್ರೆ ನಿಶ್ಚಿತವಾಗಿ ಭಾಗಿಯಾಗಿದ್ದಾರೆ. ಇದೆಲ್ಲದರ ಬಗ್ಗೆ ತನಿಖೆ ಆಗಲೇಬೇಕು. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದರು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…