Mysore
20
overcast clouds
Light
Dark

ಕೋವಿಡ್‌ ಹಗರಣ ಆರೋಪ ಪ್ರಕರಣ: ಸಿಎಂ ಸಿದ್ದು ಕೈಸೇರಿದ ತನಿಖಾ ಆಯೋಗದ ವರದಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್‌ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ.

ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್‌ ಶಾಕ್‌ ಎದುರಾಗಿದೆ. ಕೋವಿಡ್‌ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದ್ದು, ಈಗ ಕಾಂಗ್ರೆಸ್‌ ನಾಯಕರಿಗೆ ಪ್ರಬಲ ಅಸ್ತ್ರ ಸಿಕ್ಕಿದೆ ಎನ್ನಲಾಗಿದೆ.

ವರದಿ ಕೈ ಸೇರಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಂ.ಬಿ.ಪಾಟೀಲ್‌ ಸೇರಿದಂತೆ ಹಲವು ಸಚಿವರು ಪ್ರಕರಣ ಸಂಬಂಧ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಜಸ್ಟೀಸ್‌ ಜಾನ್‌ ಮೈಕಲ್‌ ಡಿ ಕುನ್ಹಾ ನೇತೃತ್ವದ ಆಯೋಗ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ಶಾಕ್‌ ಎದುರಾಗಿದೆ.