ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ.
ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದ್ದು, ಈಗ ಕಾಂಗ್ರೆಸ್ ನಾಯಕರಿಗೆ ಪ್ರಬಲ ಅಸ್ತ್ರ ಸಿಕ್ಕಿದೆ ಎನ್ನಲಾಗಿದೆ.
ವರದಿ ಕೈ ಸೇರಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಸಚಿವರು ಪ್ರಕರಣ ಸಂಬಂಧ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಜಸ್ಟೀಸ್ ಜಾನ್ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಎದುರಾಗಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…