Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ವರದಿ ಬಂದ ಮೇಲೆ ಕೋವಿಡ್‌ ಹಗರಣದ ತನಿಖೆ ಶುರುವಾಗುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೋವಿಡ್‌ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಶಿಫಾರಸ್ಸಿನ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಎಫ್‌ಐಆರ್‌ ಸೇರಿದಂತೆ ಪ್ರತಿಯೊಂದು ವಿಚಾರಣೆ ಮಾಡಬಹುದು. ಹಿಂದೆ ಚಾಮರಾಜನಗರಕ್ಕೂ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೆವು. ಮುಂದೆ ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಈ ಬಗ್ಗೆ ಸಂಪೂರ್ಣ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ 84 ಲಕ್ಷ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಿದ್ದಾರೆ. 84 ಲಕ್ಷ ಆರ್‌ಟಿಪಿಸಿಆರ್‌ ಟೆಸ್ಟ್‌ಗೆ 500 ಕೋಟಿ ರೂಪಾಯಿ ಆಗಿದೆ. ಈ ಸಂಬಂಧ 400 ಕೋಟಿ ಹಣ ಪಾವತಿ ಮಾಡಿದ್ದಾರೆ. ಅಧಿಕಾರಿಗಳೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಸಹಿ ಮತ್ತು ಆದೇಶ ಕೊಟ್ಟಿದ್ದಾರೋ ಆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಾಹಿರವಾಗಿ ಏನೇನೂ ಆಗಿದೆಯೋ ಎಲ್ಲವನ್ನು ಈಗ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

Tags: