ಬೆಂಗಳೂರು: ಕೋವಿಡ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಶಿಫಾರಸ್ಸಿನ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಎಫ್‌ಐಆರ್ ಸೇರಿದಂತೆ ಪ್ರತಿಯೊಂದು ವಿಚಾರಣೆ ಮಾಡಬಹುದು. ಹಿಂದೆ ಚಾಮರಾಜನಗರಕ್ಕೂ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೆವು. ಮುಂದೆ ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಈ ಬಗ್ಗೆ ಸಂಪೂರ್ಣ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ 84 ಲಕ್ಷ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿದ್ದಾರೆ. 84 ಲಕ್ಷ ಆರ್‌ಟಿಪಿಸಿಆರ್ ಟೆಸ್ಟ್‌ಗೆ 500 ಕೋಟಿ ರೂಪಾಯಿ ಆಗಿದೆ. ಈ ಸಂಬಂಧ 400 ಕೋಟಿ ಹಣ ಪಾವತಿ ಮಾಡಿದ್ದಾರೆ. ಅಧಿಕಾರಿಗಳೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಸಹಿ ಮತ್ತು ಆದೇಶ ಕೊಟ್ಟಿದ್ದಾರೋ ಆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಾಹಿರವಾಗಿ ಏನೇನೂ ಆಗಿದೆಯೋ ಎಲ್ಲವನ್ನು ಈಗ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…