ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಂದಿನ ಆರ್ಥಿಕ ಸಲಹೆಗಾರ ರಘು ಜಿ.ಪಿ ಅವರನ್ನು ಅಮಾನತು ಮಾಡಲಾಗಿದೆ.
ಅಮಾನತು ಅಧಿಕಾರಿ ರಘು ಜಿ.ಪಿ ಅವರು ಆರ್ಥಿಕ ಸಲಹೆಗಾರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರೆ ಸಾಮಗ್ರಿ ಖರೀದಿಸಿದ್ದು, ಜೊತೆಗೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಇಲಾಖಾ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಬೆಳಕಿಗೆ ಬಂದಿದೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರೆ ಸಾಮಗ್ರಿ ಖರೀದಿಸಿರುವ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಫಿಸಿರುವ ಕುರಿತಂತೆ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ತನಿಖಾ ಸಮಿತಿ ರಚಿಸಿತ್ತು.