ರಾಜ್ಯ

ಕೋವಿಡ್‌ ಅಕ್ರಮ ಆರೋಪ: ಓರ್ವ ಅಧಿಕಾರಿ ಅಮಾತನು

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಪಿಪಿಇ ಕಿಟ್‌ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಂದಿನ ಆರ್ಥಿಕ ಸಲಹೆಗಾರ ರಘು ಜಿ.ಪಿ ಅವರನ್ನು ಅಮಾನತು ಮಾಡಲಾಗಿದೆ.

ಅಮಾನತು ಅಧಿಕಾರಿ ರಘು ಜಿ.ಪಿ ಅವರು ಆರ್ಥಿಕ ಸಲಹೆಗಾರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್‌ ಮತ್ತು ಇತರೆ ಸಾಮಗ್ರಿ ಖರೀದಿಸಿದ್ದು, ಜೊತೆಗೆ ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಇಲಾಖಾ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಬೆಳಕಿಗೆ ಬಂದಿದೆ.

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್‌ ಮತ್ತು ಇತರೆ ಸಾಮಗ್ರಿ ಖರೀದಿಸಿರುವ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಫಿಸಿರುವ ಕುರಿತಂತೆ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ತನಿಖಾ ಸಮಿತಿ ರಚಿಸಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

1 hour ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

1 hour ago