Mysore
25
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಕೋವಿಡ್‌ ವೇಳೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ: ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

ಬೆಂಗಳೂರು: ಕೋವಿಡ್‌ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆಗ ಯಾವುದೇ ರೀತಿಯ ಕಾನೂನು ಬಾಹಿರ ಕೆಲಸ ಮಾಡಲಿಲ್ಲ. ಅಂತಃಕರಣದಿಂದ ಕೆಲಸ ಮಾಡಿದ್ದೇನೆ ಎಂದರು.

ಕಳೆದ ರಾತ್ರಿ ರಾಜ್ಯ ಸರ್ಕಾರ ಮೈಕೆಲ್‌ ಡಿ ಕುನ್ಹಾ ನೇತೃತ್ವದ ಆಯೋಗದಿಂದ ಮಧ್ಯಂತರ ವರದಿ ಪಡೆದಿದೆ. ಎಲ್ಲರೂ ಸೇರಿ ವರದಿಯ ಬಗ್ಗೆ ಗುಣಾಕಾರ ಹಾಗೂ ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಕೋವಿಡ್‌ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದರು.

ಕೋವಿಡ್‌ ಸಮಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್‌ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನ ಇದ್ದರೂ ಟಾಸ್ಕ್‌ ಮೂಲಕ ತೆಗೆದುಕೊಳ್ಳುತ್ತಿದ್ದೆವು. ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಸಹ ಅದರಲ್ಲಿದ್ದರು. ವರದಿ ಬಗ್ಗೆ ಸರ್ಕಾರದ ಹೇಳಿಕೆ ಬರಲಿ. ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

 

Tags:
error: Content is protected !!