ಬೆಂಗಳೂರು: ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆಗ ಯಾವುದೇ ರೀತಿಯ ಕಾನೂನು ಬಾಹಿರ ಕೆಲಸ ಮಾಡಲಿಲ್ಲ. ಅಂತಃಕರಣದಿಂದ ಕೆಲಸ ಮಾಡಿದ್ದೇನೆ ಎಂದರು.
ಕಳೆದ ರಾತ್ರಿ ರಾಜ್ಯ ಸರ್ಕಾರ ಮೈಕೆಲ್ ಡಿ ಕುನ್ಹಾ ನೇತೃತ್ವದ ಆಯೋಗದಿಂದ ಮಧ್ಯಂತರ ವರದಿ ಪಡೆದಿದೆ. ಎಲ್ಲರೂ ಸೇರಿ ವರದಿಯ ಬಗ್ಗೆ ಗುಣಾಕಾರ ಹಾಗೂ ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಕೋವಿಡ್ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದರು.
ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನ ಇದ್ದರೂ ಟಾಸ್ಕ್ ಮೂಲಕ ತೆಗೆದುಕೊಳ್ಳುತ್ತಿದ್ದೆವು. ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಸಹ ಅದರಲ್ಲಿದ್ದರು. ವರದಿ ಬಗ್ಗೆ ಸರ್ಕಾರದ ಹೇಳಿಕೆ ಬರಲಿ. ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…