ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ ನಿರಪರಾಧಿಯಾಗಿದ್ದಾರೆ. ಆದ್ದರಿಂದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಅಮಾಯಕನೊಬ್ಬನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಆತನನ್ನೇ ಆರೋಪಿ ಎಂದು ಬಿಂಬಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕೂಡ ತನಿಖೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಮಾನಸಿಕವಾಗಿ ಅಸ್ಥಿರವಾಗಿರುವ ವ್ಯಕ್ತಿಯು ಒಂದು ದಶಕದಿಂದ ಸಂಸ್ಥೆಯೊಂದರಲ್ಲಿ ಹೇಗೆ ಕೆಲಸ ಮಾಡಬಹುದು ಎಂದು ಪ್ರಶ್ನೆ ಮಾಡಿದ್ದಾರೆ.
ಈ ಆರೋಪ ನಿರಾಕರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಪ್ರತಿಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ. ಪೊಲೀಸರು ಯಾವುದೇ ಪಕ್ಷಪಾತವಿಲ್ಲದೇ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ತನಿಖೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿರುವುದು ಬಹಿರಂಗವಾದರೆ, ಪೊಲೀಸರು ಅವರನ್ನು ಬಿಡುವುದಿಲ್ಲ ಎಂದು ಅವರು ಇಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.





