ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ. ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು. ಪಾಪಿಗಳ ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ದುಷ್ಕೃತ್ಯವೆಸಗಿದ ಕಿರಾತಕರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಸ್ತೆ ಬದಿ ಮಲಗಿದ್ದ ಹಸುಗಳ ಪೈಕಿ ಮೂರು ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದು ವಿಕೃತಿ ಮೆರೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಗಂಭೀರ ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಸುಗಳು ಚೇತರಿಸಿಕೊಳ್ಳುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯ ಕೇಳಿಬರುತ್ತಿದೆ.
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…
ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…
ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…