Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿಯ ಬಂಧನ

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಶೇಕ್‌ ನಸ್ರು ಎಂದು ಗುರುತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಬಟ್ಟೆ ಹೊಲೆಯುವ ಅಂಗಡಿಗಳಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧನಕ್ಕೆ ಒಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ.24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಎಸ್.ಗಿರೀಶ್‌ ಅವರು, ಈ ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿರುವುದು ಕಂಡುಬಂದಿಲ್ಲ. ಆರೋಪಿಯನ್ನು ಬಂಧಿಸಿ ಜನವರಿ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ ಎಂದು ಹೇಳಿದ್ದಾರೆ.

Tags:
error: Content is protected !!