ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಶೇಕ್ ನಸ್ರು ಎಂದು ಗುರುತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಬಟ್ಟೆ ಹೊಲೆಯುವ ಅಂಗಡಿಗಳಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆರೋಪಿಯನ್ನು ಬಂಧನಕ್ಕೆ ಒಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ.24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಎಸ್.ಗಿರೀಶ್ ಅವರು, ಈ ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿರುವುದು ಕಂಡುಬಂದಿಲ್ಲ. ಆರೋಪಿಯನ್ನು ಬಂಧಿಸಿ ಜನವರಿ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ ಎಂದು ಹೇಳಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…