ರಾಜ್ಯ

ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅಖಾಡಕ್ಕೆ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಭಾರೀ ಉತ್ಸಾಹದಲ್ಲಿದ್ದ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಈ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲು ಯೋಗೇಶ್ವರ್‌ ನಿರ್ಧಾರ ಮಾಡಿದ್ದಾರೆ.

ಪರಿಣಾಮ ಯೋಗೇಶ್ವರ್‌ ಅವರು, ವಿಧಾನಪರಿಷತ್‌ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಜೆಡಿಎಸ್‌ ಚಿಹ್ನೆಯಿಂದ ಚುನಾವಣೆಗೆ ಸ್ಪರ್ಧಿಸಲು ಹೇಳಿದ್ದರು. ಇದನ್ನು ನಾನು ತಿರಸ್ಕರಿಸಿದ್ದೇನೆ. ಕೊನೆ ಕ್ಷಣದವರೆಗೂ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ, ನನಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ದೊರೆತಿಲ್ಲ. ಹೀಗಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್‌ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡುತ್ತಾರೆ ಎಂಬ ಮಾಹಿತಿ ಬಂದಿದೆ. ಹೀಗಾಗಿ ಜೆಡಿಎಸ್‌ನಿಂದ ನಿಖಿಲ್‌ ಸ್ಪರ್ಧಿಸುತ್ತಾರೆ ಅಂದ ಮೇಲೆ ಇನ್ನೇನಿದೆ. ಅದಕ್ಕಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago