ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.
ಎರಡು ದಿನ ಹಿಂದೆಯಷ್ಟೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಇದೀಗ ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್ ವಿರುದ್ಧ ದೂರು ನೀಡಿದ್ದಾನೆ.
ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಸಮೀರ್ ಎಂ.ಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಹಾಕಬಹುದು. ನಮಗೆ ರಕ್ಷಣೆ ನೀಡಿ ಎಂದು ದೂರು ನೀಡಿದ್ದು, ಬೆಳ್ತಂಗಡಿ ಪೊಲೀಸರು ದೂರು ಅರ್ಜಿಯನ್ನು ದಾಖಲಿಸಿಕೊಂಡಿದ್ದಾರೆ.





