Mysore
29
scattered clouds

Social Media

ಗುರುವಾರ, 12 ನವೆಂಬರ್ 2026
Light
Dark

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: ಮೂರು ತಿಂಗಳಲ್ಲಿ ಹೊಸ ಆ್ಯಪ್‌ ಎಂದ ಸಚಿವ ಯು.ಟಿ. ಖಾದರ್‌!

Dharmasthala Case No Acts Should Tarnish the culture of dharmasthala temple

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್‌ ಆ್ಯಪ್‌ ತರಲು ಯೋಜಿಸಲಾಗಿದೆ. ಮೂರು ತಿಂಗಳಲ್ಲಿ ಆ್ಯಪ್‌ ಬಿಡುಗಡೆ ಮಾಡುವುದಾಗಿ  ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಖರೀದಿಸುವ ಎಣ್ಣೆ ಎಷ್ಟು ಬಳಕೆಯಾಗುತ್ತಿದೆ ಎಂಬ ದತ್ತಾಂಶ ಸಂಗ್ರಹಿಸಿ, ಅದರ ಮೇಲೆ ನಿಗಾ ಇಡುವುದು ಆ್ಯಪ್‌ನ ಉದ್ದೇಶವಾಗಿದೆ.

ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಎಣ್ಣೆಯ ಮರುಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದ ಖಾದರ್‌, ಜನರು ಅನಾರೋಗ್ಯಕ್ಕೆ ತುತ್ತಾಗುವುದನ್ನು ತಡೆಯಬೇಕು ಎಂದು ಹೇಳಿದ್ದಾರೆ. ಮುಂದಿನ ಹತ್ತು ವರ್ಷಗಳಲ್ಲಿ ರೋಗಿಗಳ ಸಂಖ್ಯೆ ಕಡಿಮೆ ಮಾಡಿ, ಜನರ ಆರೋಗ್ಯ ಸುಧಾರಿಸುವುದೇ ತಮ್ಮ ಆಶಯ ಎಂದು ತಿಳಿಸಿದರು.

Tags:
error: Content is protected !!