ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.
ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್ ಕಚೇರಿಯಲ್ಲಿ ಸ್ವೀಕರಿಸಿದರು.
ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…