ರಾಜ್ಯ

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸೂಚನೆ

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿ.ಎಂ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು.

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.

ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 min ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago