ರಾಜ್ಯ

ಬಂಡವಾಳ ಹೂಡಿಕೆ ವಾತಾವರಣ ನಿರ್ಮಿಸಿ : ಸಭೆಯಲ್ಲಿ ಸಿಎಂ ಸೂಚನೆ ; ಹೀಗಿವೆ ಇತರೆ ಮುಖ್ಯಾಂಶಗಳು

ಬೆಂಗಳೂರು : ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ನಿಯಮ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಈ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿ: ಅಂಗಾಂಗ ಕಸಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ : ವೈದ್ಯಕೀಯ ಸಚಿವ ಶರಣಪ್ರಕಾಶ್‌ ಪಾಟೀಲ್

ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.೧೦.೨೭ ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.೬೦ರಷ್ಟು ಹೂಡಿಕೆಗಳು ಅನುಷ್ಠಾನ ಹಂತದಲ್ಲಿವೆ ಎಂದು ತಿಳಿಸಿದರು.

ಸುಮಾರು ರೂ.೧.೫ ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ. ಸುಪ್ರೀಂಕೋರ್ಟ್ ತೀರ್ಪಿನ ನೆಪ ಹೇಳಿಕೊಂಡು ಅಧಿಕಾರಿಗಳು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೆ ಇರುವುದೂ ಇದೇ ಸುಪ್ರೀಂ ಕೋರ್ಟ್. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆ ನಮಗೆ ಆಗತ್ತೆ ಅನ್ನುವ ನೆಪ ಹೇಳಿಕೊಂಡು ಕೂತರೆ ಕ್ರಮ ಜರುಗಿಸಬೇಕಾಗತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆಯ ಇತರೆ ಮುಖ್ಯಾಂಶಗಳು ಹೀಗಿವೆ…

ರಾಜ್ಯದಲ್ಲಿ work force ಹೆಚ್ಚಾಗಿದೆ. ಕೌಶಲ್ಯಯುತ labour force ಕೂಡ ರಾಜ್ಯದಲ್ಲಿ ಹೆಚ್ಚಾಗಿದೆ. ಹೀಗಾಗಿ ಉದ್ಯೋಗ ಸೃಷ್ಟಿ ರಾಜ್ಯದಲ್ಲಿ ಹೆಚ್ಚೆಚ್ಚು ಆಗುತ್ತಿದೆ. ಕೈಗಾರಿಕೆಗಳಿಗೆ ಅನುಮತಿ ನೀಡುವ ಮತ್ತಿತರ ವಿಚಾರದಲ್ಲಿ ಪ್ರಕ್ರಿಯೆ ಇನ್ನಷ್ಟು ವೇಗ ಪಡೆಯಬೇಕು. ಇದನ್ನು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ನೆಪಗಳನ್ನು ಹೇಳಿಕೊಂಡು ವಿಳಂಭ ಮಾಡಬಾರದು ಎನ್ನುವ ಅಭಿಪ್ರಾಯವನ್ನು ಸಚಿವರಾದ ಪ್ರಿಯಾಂಕ್ ಖರ್ಗೆಯವರು ಸಭೆಯಲ್ಲಿ ಪ್ರಸ್ತಾಪಿಸಿದರು.

ತಮಿಳುನಾಡಿನಲ್ಲಿ 51 SEZ ಗಳಿದ್ದು ಒಟ್ಟಾರೆ 8.9% ಕೊಡುಗೆ ನೀಡುತ್ತಿವೆ.

*ಆದರೆ, ರಾಜ್ಯದಲ್ಲಿ ಕೇವಲ 37 SEZ (special economic zone)ಗಳಿದ್ದು ನಾವು 8.2% ರಷ್ಟು ಕೊಡುಗೆ ನೀಡುತ್ತಿದ್ದೇವೆ. ಇದರಲ್ಲೂ ರಾಜ್ಯದ ಕೊಡುಗೆಯೇ ಹೆಚ್ಚಾಗಿದೆ. ಇಂಥಾ ಅನುಕೂಲಕರ ಪರಿಸ್ಥಿತಿಯನ್ನು ಅಧಿಕಾರಿಗಳು ಗಮನಿಸುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇದನ್ನು ಓದಿ: ಕೆರೆಗಳ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ

•ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾದರೆ ಮಾತ್ರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

•ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

• ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
• ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು ಅನುಷ್ಠಾನ ಹಂತದಲ್ಲಿವೆ.
• ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ

• ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.

• ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

• ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

• ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

• ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು.

• ಕೇಂದ್ರ ಸರ್ಕಾರ 2ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

• ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ.

• ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು ಅನುಷ್ಠಾನ ಹಂತದಲ್ಲಿವೆ.

• ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

10 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

11 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

16 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago