ರಾಜ್ಯ

ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ; ನಾಳೆಯಿಂದಲೇ ಕಾರ್ಯಚರಣೆ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ:
ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago