ಚಿಕ್ಕಮಗಳೂರು : ಮುಂಗಾರು ಮಳೆಗೆ ಜಿಲ್ಲೆಯಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಜಲವೈಭವ ಸೃಷ್ಠಿಯಾಗುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಹಸಿರು ಬೆಟ್ಟ ಗುಡ್ಡಗಳ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತದ ಅದ್ಭುತ ದೃಶ್ಯವನ್ನು ನೋಡಲು ಎರಡು ಕಣ್ಣು ಸಾಲದಾಗಿದೆ. ೧೦೦ ಅಡಿ ಎತ್ತರದಿಂದ ಬೀಳುತ್ತಿರುವ ಜಲಧಾರೆಯ ವೈಭವಕ್ಕೆ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ. ಅಲ್ಲದೆ ರಸ್ತೆಯ ಉದ್ದಕ್ಕೂ ಮಿನಿ ಜಲಪಾತಗಳು ಕೂಡ ಸೃಷ್ಠಿಯಾಗಿದ್ದು, ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತ ಪ್ರವಾಸಿಗರು ಫುಲ್ ಎಂಜಾಯ್ ಮಾಡುತ್ತಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.