ರಾಜ್ಯ

ಚಾರ್ಮಾಡಿ ಘಾಟ್ ನಲ್ಲಿ ನೂರಕ್ಕೂ ಹೆಚ್ಚು ಮಿನಿ ಜಲಪಾತ ಸೃಷ್ಠಿ

ಚಿಕ್ಕಮಗಳೂರು : ಮುಂಗಾರು ಮಳೆಗೆ ಜಿಲ್ಲೆಯಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ ನಲ್ಲಿ ಜಲವೈಭವ ಸೃಷ್ಠಿಯಾಗುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಹಸಿರು ಬೆಟ್ಟ ಗುಡ್ಡಗಳ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತದ ಅದ್ಭುತ ದೃಶ್ಯವನ್ನು ನೋಡಲು ಎರಡು ಕಣ್ಣು ಸಾಲದಾಗಿದೆ.  ೧೦೦ ಅಡಿ ಎತ್ತರದಿಂದ ಬೀಳುತ್ತಿರುವ ಜಲಧಾರೆಯ ವೈಭವಕ್ಕೆ ಪ್ರವಾಸಿಗರು ಫುಲ್‌ ಫಿದಾ ಆಗಿದ್ದಾರೆ. ಅಲ್ಲದೆ ರಸ್ತೆಯ ಉದ್ದಕ್ಕೂ ಮಿನಿ ಜಲಪಾತಗಳು ಕೂಡ ಸೃಷ್ಠಿಯಾಗಿದ್ದು, ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತ ಪ್ರವಾಸಿಗರು ಫುಲ್‌ ಎಂಜಾಯ್‌ ಮಾಡುತ್ತಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

24 mins ago

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…

1 hour ago

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

2 hours ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

3 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

3 hours ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

4 hours ago