ಸರ್ಕಾರ ಮುಖ ಮುಚ್ಚಿಕೊಳ್ಳೋಕೆ ಎಸ್ ಐಟಿ ಆರೋಪ ಪಟ್ಟಿಗಳನ್ನು ಸೋರಿಕೆ ಮಾಡಲಾಗುತ್ತಿದೆ
ಬೆಂಗಳೂರು: ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಿತ್ಯವೂ ಕೇಳಿಬರುತ್ತಿರುವ ಭ್ರಷ್ಟಾಚಾರ ಹಗರಣಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರ ನಾಗಮಂಗಲ ಗಲಭೆಯನ್ನು ಸೃಷ್ಟಿಸಿರುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಶನಿವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೂಡಾ ಹಗರಣ, ಸರ್ಕಾರದ ಹಗರಣಗಳ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿಯೇ ಎಸ್ ಐಟಿ ತನಿಖೆಯ ಆರೋಪ ಪಟ್ಟಿಗಳ ಬಗ್ಗೆ, ವೈಯಕ್ತಿಕ ಚಾಟ್ ಬಗ್ಗೆ ಚರ್ಚೆ ಶುರುವಾಗುತ್ತದೆ. ಇದೆಲ್ಲಾ ಹೇಗೆ ಸಾರ್ವಜನಿಕವಾಗಿ ಬಹಿರಂಗವಾಗಲು ಸಾಧ್ಯ? ತನಿಖಾ ಸಂಸ್ಥೆಗಳೇ ಸೋರಿಕೆ ಮಾಡುತ್ತಿವೆ. ಜನರ ಗಮನವನ್ನು ಬೇರೆಡೆಗೆ ಹೊರಳಿಸಲು ಸರ್ಕಾರ ಇಂಥ ತಂತ್ರಗಾರಿಕೆ ಮಾಡುತ್ತಿದೆ ಎಂದು ದೂರಿದರು.
ನಾಗಮಂಗಲ ಘಟನೆಯಲ್ಲಿ ಅಮಾಯಕರನ್ನು ಬಂಧಿಸಿರುವದು ಸತ್ಯ ಎಂಬ ಸಚಿವ ಚಲುವರಾಯಸ್ವಾಮಿ ಅವರು ಒಪ್ಪಿಕೊಂಡಿದ್ದಾರೆ. ಮೊದಲು ಇದನ್ನು ಗೃಹ ಸಚಿವರು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದರು. ಎಫ್ಐಆರ್ ನಲ್ಲಿ ಕೋಮು ಗಲಭೆ ಅಂತ ಸೇರಿಸಿದ್ದಾರೆ. ನಮ್ಮನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ. ಮೂರು ಬಾರಿ ಗೃಹಮಂತ್ರಿ ಆಗಿದ್ದವರ ಅನುಭವ ಇದು. ವಿಷಯ ಹೇಳಬೇಕಾದರೇ ಮಾಹಿತಿ ಕ್ರೋಡೀಕರಿಸಿ ಹೇಳಬೇಕು. ಪಾಪ ಅವರು ಬಹಳ ದೊಡ್ಡವರು ಇದ್ದಾರೆ ಎಂದು ಕೇಂದ್ರ ಸಚಿವರು ಛೇಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗ ಅರಿವಾಗಿದೆ. ಅಲ್ಲಿ ಗಲಾಟೆ ಆಗಲಿಕ್ಕೆ ಅವಕಾಶ ಇರಲಿಲ್ಲ. ಇದ್ದಿದ್ದು 150 ಜನ, ನಿಯಂತ್ರಣ ಮಾಡಬಹುದಿತ್ತು. ಇಂತಹ ಪ್ರಕರಣ ನಡೆಯಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇದ್ದಂತಿದೆ. ಕಳೆದ ಮೂರು ತಿಂಗಳಲ್ಲಿ ಹಲವಾರು ವಿಚಾರಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದನ್ನು ನೋಡಿದ್ದೇನೆ. ಆರೋಪ ಪಟ್ಟಿ ಎಸ್ ಐಟಿ ಬಳಿ ಇರುತ್ತದೆ. ಅದು ಹೇಗೆ ಹೊರಗೆ ಸೋರಿಕೆ ಆಗುತ್ತದೆ? ಸರ್ಕಾರ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂಥ ಸೋರಿಕೆ ಮಾಡುತ್ತದೆ ಎಂದು ಅವರು ದೂರಿದರು.
ನಾನು ನಾಗಮಂಗಲ ತಾಲ್ಲೂಕು ಅಧ್ಯಕ್ಷನ ಹೆಸರು ಹೇಳಿಲ್ಲ. ಅವರ ಮಗನ ಹೆಸರು ಹೇಳಿಲ್ಲ. ಅಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಇದ್ದರು ಎಂದು ಹೇಳಿದ್ದೇನೆ. ಎಲ್ಲ ಜನಾಂಗ ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಮುನಿರತ್ನ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ
ಬಿಜೆಪಿ ಶಾಸಕ ಮುನಿರತ್ನ ಅವರು ಜಾತಿ ನಿಂದನೆ ಮಾಡಿದ್ದಾರೆ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಬೆಳಗ್ಗೆಯಿಂದ ನಾನು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು, ಸಾರ್ವಜನಿಕರ ಅಹವಾಲು ಆಲಿಸುತ್ತಿದ್ದೇನೆ. ಹೀಗಾಗಿ ನನಗೆ ಏನೂ ಗೊತ್ತಿಲ್ಲ, ಯಾವುದೇ ಮಾಹಿತಿ ಇಲ್ಲ ಇಲ್ಲ ಎಂದರು ಕುಮಾರಸ್ವಾಮಿ ಅವರು.
ಕಾಂಗ್ರೆಸ್ ನವರು ನನ್ನನ್ನು ಯಾಕೆ ಪ್ರಶ್ನೆ ಮಾಡ್ತಾರೆ? ಅವರನ್ನು ನಾನು ಈಗಾಗಲೇ ಸಾವಿರಾರು ಪ್ರಶ್ನೆಗಳನ್ನು ಕೇಳಿದ್ದೇನೆ. ಮೊದಲು ಅವರ ಮುಖ್ಯಮಂತ್ರಿ ದಲಿತರ ನಿವೇಶನ ಹೊಡೆದುಕೊಂಡಿರುವ ಬಗ್ಗೆ ಉತ್ತರ ಕೊಡಲಿ. ಈ ರೀತಿಯ ಘಟನೆ ನಡೆದಿದ್ದರೆ ಕ್ರಮ ತೆಗೆದುಕೊಳ್ಳಬೇಕಿರೋದು ಸರ್ಕಾರ. ನಾನು ಕ್ರಮ ತೆಗೆದುಕೊಳ್ಳೋಕೆ ಆಗುತ್ತಾ? ಎಂದರು ಅವರು.
ನಾನು ಇಂತಹ ವಿಷಯಗಳಿಗೆ, ಅದರಲ್ಲಿಯೂ ಒಂದು ಸಮಾಜ ಬಗ್ಗೆ ಅವಹೇಳನ ಮಾಡೋದಕ್ಕೆ, ಹಿಂಸೆ ನೀಡೋಕೆ, ಭ್ರಷ್ಟ ವ್ಯವಸ್ಥೆಗೆ ಬೆಂಬಲ ಕೊಟ್ಟಿಲ್ಲ. ಸರ್ಕಾರ ಅವರ ಜವಾಬ್ದಾರಿ ನಿರ್ವಹಣೆ ಮಾಡಿಕೊಳ್ಳಬೇಕು ಎಂದರು.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…