ರಾಜ್ಯ

ಮಕ್ಕಳಲ್ಲಿ ಸೃಜನಶೀಲತೆ ಅರಳಬೇಕು : ಕೆ.ವಿ.ಪ್ರಭಾಕರ್

ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಆಯೋಜಿಸಿದ್ದ ಚಿಣ್ಣರ ಜಾಗೃತಿ-ಪ್ರಶಸ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಪ್ರತಿ ಮಗುವೂ ಹುಟ್ಟುತ್ತಲೇ ಪ್ರತಿಭೆಗಳ ಕಣಜ ಆಗಿರುತ್ತದೆ. ಆ ಮಗುವಿನ ಮನಸ್ಸಿನ, ಆಲೋಚನೆಯ ಕಿಟಕಿ ತೆರೆದಾಗ ಪ್ರತಿಭೆ ಹೊರಗೆ ಬರುತ್ತದೆ. ಆದ್ದರಿಂದ ಮಕ್ಕಳನ್ನು ಯಾರೂ ಪ್ರತಿಭಾವಂತರನ್ನಾಗಿ ಮಾಡುವ ಅಗತ್ಯವಿಲ್ಲ. ಪ್ರತಿಭೆ ಅರಳಲು ಅಗತ್ಯವಾದ ವಾತಾವರಣ ಕಲ್ಪಿಸಿದರೆ ಸಾಕು ಎಂದರು.

ಮಕ್ಕಳ ಬೆನ್ನು ತಟ್ಟುವುದು, ಪ್ರತಿಭೆ ಗುರುತಿಸುವುದು ಎಂದರೆ, ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ.

ಇಂದು ಪುರಸ್ಕಾರಗೊಂಡ ಮಕ್ಕಳಿಗೆ ನಾನೊಂದು ಕಿವಿಮಾತು ಹೇಳಲು ಬಯಸುತ್ತೇನೆ.‌ ನೀವುಗಳು ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆಯನ್ನು ಯಾವತ್ತೂ ಕಳೆದುಕೊಳ್ಳಬಾರದು. ಇಲ್ಲದಿದ್ದರೆ ನಿಮ್ಮೊಳಗಿನ ಪ್ರತಿಭೆ ಬಾಡುತ್ತದೆ. ಮೊಬೈಲ್, ಟ್ಯಾಬ್ ಗಳ ಗೀಳು ನಿಮ್ಮೊಳಗಿನ ಸೃಜನಶೀಲತೆಯನ್ನು ಕೊಂದು ಪ್ರತಿಭಾಶೂನ್ಯರನ್ನಾಗಿಸುತ್ತದೆ. ವೀಡಿಯೊ ಗೇಮ್ ಗಳು ಕೇವಲ kill, target, fight ಅನ್ನುವ ಆಕ್ರಮಣಕಾರಿ ವರ್ತನೆಯನ್ನೇ ಬೆಳೆಸುತ್ತವೆ. ಹೀಗಾಗಿ ಮೊಬೈಲ್ ಬಿಡಿ-ಪುಸ್ತಕ ಹಿಡಿ-ಮೈದಾನದ ಕಡೆ ನಡಿ ಎನ್ನುವುದನ್ನು ಮಕ್ಕಳು ಪಾಲಿಸುತ್ತಾ, ಕಲಿಕೆಯ ಕುತೂಹಲ, ಅಧ್ಯಯನಶೀಲತೆಯನ್ನು ಬದುಕಿನ ಕೊನೆ ಕ್ಷಣದವರೆಗೂ ಪಾಲಿಸಿ ಎಂದು ಕರೆ ನೀಡಿದರು.

ಮಕ್ಕಳ ದೃಷ್ಟಿಕೋನದಲ್ಲಿ ಭವಿಷ್ಯದ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದ ಜವಾಹರಲಾಲ್ ನೆಹರೂ ಅವರ ಗುರಿಯ ಭಾಗವಾಗಿಯೇ ಬಾಲಭವನ ಸ್ಥಾಪನೆಯಾಗಿದೆ. ಅದಕ್ಕೇ “ಜವಾಹರ ಬಾಲ ಭವನ” ಅಂತಲೇ ಹೆಸರಿಡಲಾಗಿದೆ ಎಂದರು.

ಇದನ್ನು ಓದಿ: ದ್ವಿದಳ ಧಾನ್ಯ ಬೆಳೆಯಲು 35 ಸಾವಿರ ಕೋಟಿ ಕೇಂದ್ರ ಅನುದಾನ : ಎಚ್‌ಡಿಕೆ

ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಅದಕ್ಕೇ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿರು.

ಕತೆಗಳನ್ನು ಕೇಳುವ ಮೂಲಕ ಮಕ್ಕಳ ಕಲ್ಪನಾ ಜಗತ್ತು ವಿಪರೀತ ವಿಕಾಸಗೊಳ್ಳುತ್ತಿತ್ತು.
ಇದನ್ನು ಜವಾಹರಲಾಲ್ ನೆಹರೂ ಅವರು ಮನಗಂಡಿದ್ದರು. ಮಕ್ಕಳ ದೃಷ್ಟಿಕೋನದಲ್ಲಿ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ನೀಲನಕ್ಷೆ ನೆಹರೂ ಅವರು ಸಿದ್ದಪಡಿಸಿದ್ದರು ಎಂದು ಸ್ಮರಿಸಿದರು.

ನೆಹರೂ ಅವರು, “ಮಕ್ಕಳು ತೋಟದಲ್ಲಿರುವ ಮೊಗ್ಗುಗಳಂತೆ, ಈ ಮೊಗ್ಗುಗಳನ್ನು ಎಚ್ಚರಿಕೆಯಿಂದ ಪ್ರೀತಿಯಿಂದ ಪೋಷಿಸಬೇಕು, ಆಗಷ್ಟೆ ಜವಾಬ್ದಾರಿಯುತ ನಾಗರಿಕರು ರೂಪುಗೊಳ್ಳುತ್ತಾರೆ” ಎನ್ನುವ ಸ್ಪಷ್ಟವಾದ ವೈಜ್ಞಾನಿಕ ತಿಳಿವಳಿಕೆ ಮತ್ತು ದೂರ ದೃಷ್ಟಿ ಹೊಂದಿದ್ದರು.

ಈ ದೂರದೃಷ್ಟಿಯಿಂದ ಬಾಲಭವನ‌ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಬಾಲ ಭವನದ ಜೊತೆಗೆ ಪ್ರೆಸ್ ಕ್ಲಬ್ ಕೂಡ ಕೈ ಜೋಡಿಸಿ ಪತ್ರಕರ್ತರ ಮಕ್ಕಳಿಗೆ ಅವರೊಳಗಿನ ಕ್ರಿಯಾಶೀಲತೆ ಅರಳಲು, ಮನೋಲೋಕ ವಿಸ್ತಾರಗೊಳ್ಳಲು ಮುಂದಾಗಿರುವುದು ಆರೋಗ್ಯಕಾರಿ ಬೆಳವಣಿಗೆ ಎಂದು ಶ್ಲಾಘಿಸಿದರು.

ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ , ಬಾಲ ಭವನ‌ ಅಧ್ಯಕ್ಷರಾದ ಬಿ.ಆರ್.ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹೇಶ್, ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ನಟರಾಜ್, ಜನಪದ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಗಾಯಕ ಅಕ್ಬರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

7 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

8 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

9 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

15 hours ago