ರಾಜ್ಯ

ರಶ್ಮಿಕಾ ವಿರುದ್ಧ ಟೀಕೆ ; ಶಾಸಕ ರವಿ ಗಣಿಗ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಕನ್ನಡದ ಕೊಡಗಿನ ಮೂಲದವರಾದ ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಮಂಡ್ಯ ಶಾಸಕ ಪಿ.ರವಿಕುಮಾರ್‌ ಗಣಿಗ ಅವರು ಕುಹುಕವಾಡಿದ್ದರು.

ಸದ್ಯ ಈ ವಿಚಾರದಲ್ಲಿ ರಶ್ಮಿಕ ಪರ ನಿಂತಿರುವ ಕೊಡವ ನ್ಯಾಷನಲ್‌ ಸಂಘಟನೆ ಕಳೆದ ವಾರವಷ್ಟೆ ಕೇಂದ್ರ ಹಾಗೂ ರಾಜ್ಯ ಗೃಹ ಸಚಿವಾಲಯಕ್ಕೆ ಶಾಸಕರ ವಿರುದ್ಧ ದೂರು ದಾಖಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಶಾಸಕ ರವಿಕುಮಾರ್‌ ರಶ್ಮಿಕಾ ಮಂದಣ್ಣ ವಿಚಾರದಲ್ಲಿ ತಲೆಹಾಕಿರುವ ಕೊಡವ ನ್ಯಾಷನಲ್‌ ಸಂಘಟನೆ ಅಧ್ಯಕ್ಯ ನಾಚಪ್ಪ ಪ್ರಚಾರ ಪಡ್ಕೊತ್ತಿದ್ದಾರೆ ಎಂದು ಟೀಕಿಸಿದ್ದರು.

ಇದೀಗ, ಅಧ್ಯಕ್ಷ ನಾಚಪ್ಪ ಶಾಸಕ ರವಿಕುಮಾರ್‌ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಶಾಸಕ ರವಿಕುಮಾರ್‌ ವಿರುದ್ದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅತಿ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದಿಂದ ಬಂದವರು. ಇದೀಗ ತನ್ನ ಪರಿಶ್ರಮದಿಂದ ಅವರು ಬಹುಭಾಷ ನಟಿಯಾಗಿದ್ದಾರೆ. ಆದರೆ, ಶಾಸಕ ರವಿಕುಮಾರ್‌ ಅವರು ರಶ್ಮಿಕಾ ಅವರು ಹೆಸರು ಪ್ರಸ್ತಾಪಿಸಿ ಅನಗತ್ಯ ವಿವಾದ ಸೃಷ್ಟಿ ಮಾಡ್ತಿದ್ದಾರೆ. ಅಲ್ಲದೇ ಅವರನ್ನು ಬೆದರಿಸುವ ಮೂಲಕ ಸಂವಿಧಾನ ವಿರೋಧಿ ಚಟುವಟಿಕೆ ಮಾಡ್ತಿದ್ದಾರೆ. ಹೀಗಾಗಿ ಶಾಸಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೇ, ಮಹಿಳಾ ಆಯೋಗದ ಮಾಜಿ ಸದಸ್ಯೆ ಖುಷ್ಬೂ ಅವರಿಗೂ ಈ ಕುರಿತು ಸಂದೇಶ ರವಾನಿಸಿದ್ದಾರೆ. ಸದ್ಯ ಈ ವಿಚಾರವನ್ನು ಆಯೋಗ ಕೈಗೆತ್ತಿಕೊಂಡರೆ ಶಾಸಕ ರವಿಕುಮಾರ್‌ ಅವರಿಂದ ಸ್ಪಷ್ಟನೆ ಕೇಳಬಹುದು ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago