ರಾಜ್ಯ

ಸಿ.ಟಿ.ರವಿ ಬಂಧನ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ವರ್ತಿಸಿದ ರೀತಿ ಮತ್ತು ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರ್ಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿದ್ದು, ಇದೇ ಕಾಂಗ್ರೆಸ್‌ ಸರ್ಕಾರ. ಪ್ರತಿಭಟನೆ ದಿನದಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.. ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರ್ಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂಬ ಸಂಶಯ ವ್ಯಕ್ತವಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಬಂಡೆ ಬೆಂಬಲಿವಿದೆ ಎಂಬ ಅನುಮಾನ?

ಸದನದ ಸಭಾಂಗಣದಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಸಭಾಂಗಣದಲ್ಲಿರುವ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ ಮತ್ತು ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿ.ಟಿ.ರವಿ ಪ್ರಕರಣದ ಬಗ್ಗೆ ಪೊಲೀಸರು ಉತ್ತರಿಸಬೇಕು?

ಪೊಲೀಸರೇ ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

6 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

35 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago