Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ಸಿ.ಟಿ.ರವಿ ಜಾಮೀನು ಅರ್ಜಿ ವಿಚಾರಣೆ: ಮಧ್ಯಾಹ್ನ3ಕ್ಕೆ ಜಾಮೀನು ಕಾಯ್ದಿರಿಸಿದ ಕೋರ್ಟ್‌

ಬೆಳಗಾವಿ: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಡಿಸೆಂಬರ್‌.19) ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ ಅನ್ವಯ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿ ಇಂದು(ಡಿಸೆಂಬರ್‌.20) ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದ್ದರು.

ಈ ವೇಳೆ ಸಿ.ಟಿ.ರವಿ ಅವರ ಪರ ವಕೀಲ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ಜೆಎಂಎಫ್‌ಸಿ ನ್ಯಾಯಾಲಯವೂ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಜಾಮೀನು ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಆದೇಶ ಹೊರಡಿಸಿದೆ.

Tags:
error: Content is protected !!