ವಿಜಯಪುರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂ.ಎಲ್.ಸಿ ಸಿಟಿ ರವಿ ಸದನದಲ್ಲಿ ಅಶ್ಲೀಲ ಪದ ಬಳಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಇಂದು (ಡಿ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಐಡಿಯು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತದೆ. ಏಕೆಂದರೆ ಅದರ ಮೇಲೆ ಒತ್ತಡಿವಿದೆ. ಆದ ಕಾರಣ ನಮಗೆ ಅದರ ಮೇಲೆ ವಿಶ್ವಾಸವಿಲ್ಲ ಅಂದು ಆರೋಪಿಸಿದರು.
ಸಿಟಿ ರವಿ ಅವರ ಮೇಲೆ ಎನ್‌ಕೌಟರ್ ಪ್ಲ್ಯಾನ್ ಕೂಡ ಮಾಡಲಾಗಿತ್ತು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯ ಕಾಂಗ್ರೆಸ್ ಶತಮಾನೋತ್ಸವಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯತ್ನಾಳ್, ಇದು ನಕಲಿಯರು ಸೇರಿಕೊಂಡು ಮಾಡುತ್ತಿರುವ ಕಾಂಗ್ರೆಸ್ ಅಧಿವೇಶನ. ಗಾಂಧಿ ಹೆಸರು ಇಟ್ಟುಕೊಂಡು ಅಧಿವೇಶನ ಮಾಡುವ ಕಾರಣಕ್ಕೆ ಕಾರ್ಯಕ್ರಮಕ್ಕೆ ಪಾವಿತ್ರ್ಯತೆ ಬರುವುದಿಲ್ಲ. ಕಾಂಗ್ರೆಸ್‌ನವರು ಗಾಂಧೀಜಿಯವರನ್ನು ಮಾತ್ರ ಸ್ಮರಣೆ ಮಾಡುತ್ತಾರೆ. ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ ಮಾಡುವುದಿಲ್ಲ ಎಂದರು.
ಸನಾತನ ಧರ್ಮ ಉಳಿದರೆ ಮಾತ್ರ ಭಾರತದ ಸಂವಿಧಾನ ಉಳಿಯುವುದು ಎಂದು ಹೇಳಿದರು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…