ರಾಜ್ಯ

ಹೆಚ್ಚು ಬಜೆಟ್‌ ಮಂಡಿಸಿದ ಜೊತೆಗೆ ಹೆಚ್ಚು ಸಾಲು ಮಾಡಿದ ಕೀರ್ತಿಯೂ ಸಿದ್ದರಾಮಯ್ಯಗೆ ಸಲ್ಲಬೇಕು : ಸಿ.ಟಿ ರವಿ ವಾಗ್ದಾಳಿ

ಮೈಸೂರು : ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಯ ಜೊತೆಗೆ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿಯು ಸಿದ್ದರಾಮಯ್ಯಗೆ ಸಲ್ಲುತ್ತದೆ. ಒಟ್ಟು ಸಮಗ್ರ ಸಾಲದ ಶೇ 50ರಷ್ಟು ಸಾಲ ಇವರೊಬ್ಬರೇ ಮಾಡಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಿ ಮಾತನಾಡಿದ ಅವರು, 2024-25 ಒಂದೇ ವರ್ಷಕ್ಕೆ 1.26 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದೇ ನಿಮ್ಮ ಸಾಧನೆನಾ.? ಹಾಲಿನಿಂದ ಆಲ್ಕೋಹಲ್‌ ವರಗೆ ಬೆಲೆ ಏರಿಸಿದ ಕೀರ್ತಿ ನಿಮ್ಮದು. ಯಾವ ಸಾಧನೆಗೆ ಸಮಾವೇಶ ಮಾಡಿದ್ದೀರಿ? ಎಂದು ಕಿಡಿಕಾರಿದರು.

ಸ್ಟಾಂಪ್ ಪೇಪರ್ ಬೆಲೆ ಏರಿಕೆ, ವಾಹನ ರಿಜಿಸ್ಟರ್ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ನಿಮ್ಮ ಸಾಧನೆನಾ? ಈ ಸರ್ಕಾರದಲ್ಲಿ ಕ್ರಿಮಿನಲ್ ಮತ್ತು ಕಮ್ಯುನಲ್ ಗಳಿಗೆ ರಾಜಾಶ್ರಯ ಇದೆ.
ಜಾತಿ ಜಾತಿಗಳ ನಡುವೆ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಹಣ ಇಲ್ಲ. ಹಾಲು ಉತ್ಪಾದಕರಿಗೆ ಸಬ್ಸಿಡಿ ಕೊಟ್ಟಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಸಾಲು ಸಾಲು ಆರೋಪ ಮಾಡಿದರು.

ಎರಡು ವರ್ಷ ಕರಾಳ ದಿನ ಅನುಭವಿಸಿದ್ದೇವೆ. ಈ ಸರ್ಕಾರದ ಅವಧಿಯಲ್ಲಿ 736 ಬಾಣಂತಿ, 1600 ಕ್ಕೂ ಹೆಚ್ಚು ಶಿಶು ಮರಣ, 3000 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಸೇರಿದಂತೆ ಹಲವು ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.
ಸಿದ್ದರಾಮಯ್ಯ 1 ಕ್ಕೂ 2 ಕ್ಕೂ ಬಹಳ ವ್ಯತ್ಯಾಸ ಇದೆ. ಕೋಮ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

35 mins ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

1 hour ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

1 hour ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

2 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

3 hours ago