ಬೆಂಗಳೂರು: ಇಂದು ವಿತ್ತೆ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ. ಈ ಬಜೆಟ್‌ನಿಂದ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಲೇವಡಿ ಮಾಡಿದ್ದಾರೆ.
ಬಜೆಟ್ ಬಗ್ಗೆ ಮಾತನಾಡಿರುವ ಅವರು, ಕೇಂದ್ರದ ಇಂದಿನ ಬಜೆಟ್ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್‌ನಿಂದ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ. ರಾಜ್ಯದ ಜನರ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ ಎಂದು ಕಿಡಿಕಾರಿದರು.
ಬಜೆಟ್‌ನಲ್ಲಿ ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ನೀಡಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಯಾವುದೇ ಯೊಜನೆಗಳಿಲ್ಲ. ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದ ಹಲವಾರು ಯೋಜನೆಗಳಿಗೆ ಅನುದಾನ ಕೋರಿದ್ದೆವು. ಆದರೆ ಏನು ನೀಡಿಲ್ಲ. ಬೆಂಗಳೂರು ನಗರ ಹೆಚ್ಚು ಉದ್ಯೋಗ ಅವಕಾಶ ನೀಡಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ನೀಡುತ್ತಿದೆ. ಆದರೆ ಬೆಂಗಳೂರಿಗೂ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಈ ನಡೆಯನ್ನು ಸರ್ಕಾರದ ಪರವಾಗಿ ನಾನು ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ಪರ ವಾಗ್ದಾಳಿ ನಡೆಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…