ರಾಜ್ಯ

ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳಿಗೆ ಕಡಿವಾಣ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ದೇಶಾದ್ಯಂತ ಭಾರಿ ತಲೆನೋವಾಗಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವುದು, ಆನ್‍ಲೈನ್ ಗ್ಯಾಂಬ್ಲಿಂಗ್, ದ್ವೇಷ ಭಾಷಣ ಹಾಗೂ ಭಾವನಾತಕ ಪ್ರಚೋದನೆಗಳ ವಿರುದ್ಧ ಕಠಿಣ ಕಾನೂನುಗಳನ್ನು ತರಲು ರಾಜ್ಯಸರ್ಕಾರ ಮುಂದಾಗಿದೆ.

ಈ ಮೊದಲು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರು ಆನ್‍ಲೈನ್ ಗೇಮ್‍ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಕೆಲವು ಘಟನೆಗಳಲ್ಲಿ ಆನ್‍ಲೈನ್ ಗೇಮ್ ಚಟಕ್ಕೆ ಒಳಗಾದ ಕೆಲವರು ಆತಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳು ವರದಿಯಾಗಿದ್ದವು. ಮುಂದಿನ ಅಧಿವೇಶನದ ಒಳಗೆ ಕಠಿಣ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಅದೇ ರೀತಿ ಸುಳ್ಳು ಸುದ್ದಿಗಳು ವದಂತಿಗಳು ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿ ಕೊಡುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ಪರಮೇಶ್ವೆರ್ ಗೃಹ ಇಲಾಖೆಯಿಂದ ರೂಪಿಸಬೇಕಾದ ನಿಯಮಾವಳಿಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago