Mysore
25
overcast clouds
Light
Dark

ಹಾಸನದ ಹಾಲಿ ಸಂಸದರೇ ಲೋಕಸಭಾ ಚುನಾವಣೆಯ ಅಭ್ಯರ್ಥಿ: ಹೆಚ್‌.ಡಿ.ದೇವೇಗೌಡ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಹೋಳೆನರಸೀಪುರ ತಾಲೂಕಿನ ಕಟ್ಟೆ ಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಹಾಸನದಿಂದ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡುತ್ತಾರೆ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಈ ವರೆಗೆ ಹಾಸನದಿಂದ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡುತ್ತಾರಾ ಅಥವಾ ಸ್ವತಃ ದೇವೇಗೌಡರೇ ಸ್ಪರ್ಧಿಸುತ್ತಾರಾ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ.

ಲೊಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಮತ್ತು ಬಿಜೆಪಿ ಒಟ್ಟಾಗಿ ಹೋರಾಟ ಮಾಡಲಿದೆ. ಯಾವುದೇ ಅಸೂಯೆ, ಟೀಕೆ ಮಾಡದೇ ಮತ್ತೊಮ್ಮೆ ಮೋದಿಯವರನ್ನು ಪ್ರಧಣಿ ಮಾಡಲು ಒಟ್ಟಾಗಿ ಕೆಲಸ ಮಾಡೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಚುನಾವಣೆಯ ಟಿಕೆಟ್‌ ಹಂಚಿಕೆ ಕುರಿತು ಮೋದಿ,ಅಮಿತ್‌ ಶಾ, ಕುಮಾರಸ್ವಾಮಿ, ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಕೂತು ತೀರ್ಮಾನ ಮಾಡಲಿದ್ದಾರೆ ಎಂದರು. ಇನ್ನು ಪಂಚರಾಜ್ಯಗಳ ಚುನಾವಣಾ ಫಲಿತಾಂಶ, ಮುಂಬರುವ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌.ಡಿ.ದೇವೇಗೌಡ ತಿಳಿಸಿದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ