ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಹೋಳೆನರಸೀಪುರ ತಾಲೂಕಿನ ಕಟ್ಟೆ ಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುತ್ತಾರೆ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಈ ವರೆಗೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುತ್ತಾರಾ ಅಥವಾ ಸ್ವತಃ ದೇವೇಗೌಡರೇ ಸ್ಪರ್ಧಿಸುತ್ತಾರಾ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ.
ಲೊಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಹೋರಾಟ ಮಾಡಲಿದೆ. ಯಾವುದೇ ಅಸೂಯೆ, ಟೀಕೆ ಮಾಡದೇ ಮತ್ತೊಮ್ಮೆ ಮೋದಿಯವರನ್ನು ಪ್ರಧಣಿ ಮಾಡಲು ಒಟ್ಟಾಗಿ ಕೆಲಸ ಮಾಡೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಚುನಾವಣೆಯ ಟಿಕೆಟ್ ಹಂಚಿಕೆ ಕುರಿತು ಮೋದಿ,ಅಮಿತ್ ಶಾ, ಕುಮಾರಸ್ವಾಮಿ, ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಕೂತು ತೀರ್ಮಾನ ಮಾಡಲಿದ್ದಾರೆ ಎಂದರು. ಇನ್ನು ಪಂಚರಾಜ್ಯಗಳ ಚುನಾವಣಾ ಫಲಿತಾಂಶ, ಮುಂಬರುವ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…