Mysore
23
light intensity drizzle
Light
Dark

ಸದ್ಯಕ್ಕೆ ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ!

ಬೆಂಗಳೂರು : ಪವರ್‌ ಕಟ್‌ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಮಾಡುವ ಆತಂಕ ಶುರುವಾಗಿತ್ತು.

ಹೀಗಾಗಿ ಇಂಧನ ಇಲಾಖೆ ಈ ಬಗ್ಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಎಸ್‌ ಎಸ್‌ ಎಲ್‌ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ಇಂಧನ ಇಲಾಖೆ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ