ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಅಹಮ್ಮದ್‌ ವಿರುದ್ಧ ಪ್ರಮೋದ್‌ ಮುತಾಲಿಕ್‌ ಆಕ್ರೋಶ

ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ನೀಚ ಕೃತ್ಯ. ರಾಜ್ಯದಲ್ಲಿ ಇಸ್ಲಾಮಿಕ್‌ ಶಕ್ತಿಯ ಪ್ರದರ್ಶನ ಆಗುತ್ತಿದೆ. ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಜಮೀರ್‌ ಅಹಮ್ಮದ್‌ ಖಾನ್‌ ಅವರೇ, ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲ, ಅದು ನಮಗೆ ಅನ್ನ ನೀಡುತ್ತದೆ. ಗೊಬ್ಬರ ಕೊಡುತ್ತದೆ. ಔಷಧಿ ಕೊಡುತ್ತದೆ. ಇದೆಲ್ಲದರ ಜೊತೆಗೆ ಅದು ರೈತರ ಬೆನ್ನೆಲುಬು ಸಹ ಹೌದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೆ ಶ್ರೀರಾಮ ಸೇನೆಯಿಂದ ಜಮೀರ್‌ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಸುವಿನ ಕೆಚ್ಚಲು ಕೊಯ್ದಿರುವುದನ್ನು ನೋಡಿದರೆ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರವನ್ನು ನೀವೇ ಕೊಡಬೇಕು. ನೀವೇ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಇಂದು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ಇಂತಹ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಸಿಎಂ ಸಿದ್ದರಾಮಯ್ಯ…

1 min ago

ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಕೇಂದ್ರ ಸಚಿವ ಎಚ್‌ಡಿಕೆ ಆಗ್ರಹ

ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ…

14 mins ago

ಜಾತಿಗಣತಿ; ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ…

19 mins ago

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು…

47 mins ago

ಅಂತರ್ಜಾತಿ ವಿವಾಹ ಹೆಚ್ಚಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: ಜಾತಿ ವ್ಯವಸ್ಥೆಯನ್ನು ತೊಲಗಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ…

2 hours ago

ರಾಜಕೀಯವಾಗಿ ಸಿಟಿ ರವಿ ಮುಗಿಸುವ ಹುನ್ನಾರ: ಸಂಸದ ಜಗದೀಶ್‌ ಶೆಟ್ಟರ್‌

ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್‌ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್‌.ಸಿ. ಸಿಟಿ ರವಿ ಅವರನ್ನು…

2 hours ago