ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಈ ಸಂಬಂಧ ಇಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ವಿನೂತನವಾಗಿ ಪ್ರತಭಟನೆ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಬಿಜೆಪಿ ಸೈಕಲ್ ಜಾಥಾ ನಡೆಸುವ ಮೂಲಕ ಸರ್ಕಾರದ ಬೆಲೆಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಿಂದ ಸೈಕಲ್ ಜಾಥಾ ಮುಂದುವರೆಸಿದ ಬಿಜೆಪಿಯನ್ನು ಕೇವಲ 500 ಮೀ. ಅಂತರದಲ್ಲಿಯೇ ಪೊಲೀಸರು ಅವರನ್ನು ಬಂಧಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಶ್ವಥ್ ನಾರಾಯಣ್, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಿ ಸಿಆರ್ ಮೈದಾನಕ್ಕೆ ಕರೆದೊಯ್ದಿದಾರೆ.
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.50 ರೂ.ಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…