ರಾಜ್ಯ

ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್‌ ಭಾಗ್ಯ ಆರಂಭ : ಮಧು ಬಂಗಾರಪ್ಪ ಭರವಸೆ

ಬೆಳಗಾವಿ : ಮುಂಬರುವ ಆರ್ಥಿಕ ವರ್ಷದಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್‌ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿದೆ. ನಮ್ಮ ಸರ್ಕಾರ ಮತ್ತೆ ಆರಂಭಿಸುವ ಪ್ರಯತ್ನ ಮಾಡುತ್ತಿದೆ ಎಂದರು.

ತಾವು ಭೇಟಿ ನೀಡಿದ ಹಲವು ಶಾಲೆಗಳಲ್ಲಿ ಈ ರೀತಿಯ ಬೇಡಿಕೆಗಳು ಕೇಳಿಬಂದಿವೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಿಂದ ಅನುಕೂಲವಾಗಲಿದೆ. ಅದರಲ್ಲೂ ಗ್ರಾಮೀಣ ಭಾಗ ಮತ್ತು ಕಡಿಮೆ ಅಂತರದ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯವಾಗಲಿದೆ ಎಂದು ತಿಳಿಸಿದರು.

ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಉಚಿತ ಬಸ್ ಪಾಸ್‍ಗಳಿವೆ. ಮುಂದುವರೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯನ್ನೂ ಮೀರಿದ ಶಾಲೆಗಳಿಗೆ ಪ್ರಯಾಣಿಸಲು ಪ್ರತಿ ತಿಂಗಳಿಗೆ 600 ರೂ. ಸಾರಿಗೆ ಭತ್ಯೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲವಾಗುವ ಉದ್ದೇಶದಿಂದ ಮುಂದಿನ ಬಜೆಟ್‍ನಲ್ಲಿ ಚರ್ಚೆ ಮಾಡಿ ಯೋಜನೆಯನ್ನು ಮರು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago